ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್ ಬಳಿ ನಿಂತಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಉತ್ತರ ಭಾರತದಿಂದ ಬಂದಿದ್ದ ಕಿರಣ್ ಮತ್ತು ರಜನಿಸಿಂಗ್ ಮೃತ ದುರ್ದೈವಿಗಳು.
ಕೋಲಾರ ನಗರದ ಹೊರವಲಯದ ಪವನ್ ಕಾಲೇಜು ಬಳಿ ಘಟನೆ ನಡೆದಿದೆ. ಕಾರಿನಲ್ಲಿದ್ದ ಮಹಿಳೆ ಮತ್ತು ಮಕ್ಕಳು ಗಾಯಗೊಂಡಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಅತಿಯಾದ ವೇಗದಿಂದ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೋಲಾರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.