ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ : ಸ್ಥಳದಲ್ಲೇ ಇಬ್ಬರು ಯುವಕರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೈದರಾಬಾದ್‌ನಲ್ಲಿ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮತ್ತಿಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈದರಾಬಾದ್‌ನ ಮೆಡ್ಚಲ್ ಚೆಕ್‌ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ.

ಮಧ್ಯಪ್ರದೇಶದ ಒಂಬತ್ತು ಯುವಕರ ಗುಂಪು ಕಾರಿನಲ್ಲಿ ಹೈದರಾಬಾದ್‌ಗೆ ತೆರಳಿದ್ದರು, ಈ ವೇಳೆ ಬಾವರ್ಚಿ ರೆಸ್ಟೋರೆಂಟ್ ಜಂಕ್ಷನ್‌ನಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ಯಪಾನವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!