ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಕಾರು ಮತ್ತು ಟ್ರಕ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ. ಮೃತರ ಪೈಕಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ.
ತಿರುವಣ್ಣಾಮಲೈನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಒಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಮತ್ತು ಲಾರಿ ಚಾಲಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.