ಗ್ವಾಲಿಯರ್‌ನಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ.. 3 ಮಂದಿ ಮೃತ್ಯು, ಇಬ್ಬರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಅತಿವೇಗದಿಂದ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲೆಯ ಝಾನ್ಸಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಕ್ಕಿ ಫ್ಯಾಕ್ಟರಿ ಬಳಿಯ ಶಿವಪುರಿ ಲಿಂಕ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಐವರು ಸ್ನೇಹಿತರಾಗಿದ್ದು, ಗುರುವಾರ ತಡರಾತ್ರಿ ಸಂತೌ ಗ್ರಾಮದ ಶಿಟ್ಲಾ ಮಾತಾ ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಲು ತೆರಳಿದ್ದರು. ಪೂಜೆ ಮುಗಿಸಿ ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದ ಅವರು ದಾರಿಯಲ್ಲಿ ಅಪಘಾತಕ್ಕೀಡಾಗಿದ್ದಾರೆ.

ಮೃತರನ್ನು ಸಂಜಯ್ ಧಕಡ್ (24), ವಿವೇಕ್ ಜೋಶಿ (22) ಮತ್ತು ಹೃತಿಕ್ ಮಾಂಝಿ (22) ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು ಅಂಕಿತ್ ಶರ್ಮಾ ಮತ್ತು ಮೋಹಿಲ್ ರೈ ಎಂದು ಗುರುತಿಸಲಾಗಿದೆ.

ಝಾನ್ಸಿ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಕ್ಕಿ ಫ್ಯಾಕ್ಟರಿ ಬಳಿಯ ಶಿವಪುರಿ ಲಿಂಕ್ ರಸ್ತೆಯಲ್ಲಿ ಮುಂಜಾನೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!