ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರ ಗಡಿಭಾಗದ ವಿಡಪನಕಲ್ ಬಳಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ವಕೀಲರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಡಾ.ಗೋವಿಂದರಾಜು, ಡಾ.ಯೋಗೇಶ್ ಮತ್ತು ವಕೀಲ ವೆಂಕಟನಾಯ್ಡು (55) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಿಂದ ಮತ್ತೋರ್ವ ವೈದ್ಯ ಅಮರೇಗೌಡ ಪಾಟೀಲ್ ಸ್ಥಿತಿ ಗಂಭೀರವಾಗಿದೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರು ಬಳ್ಳಾರಿಗೆ ವಾಪಸಾಗುತ್ತಿದ್ದಾಗ ಈ ಘಟನೆ ನಡೆದಿದೆ.
ಬೆಂಗಳೂರು ವಿಮಾನ ನಿಲ್ದಾಣದಿಂದ ಅನಂತಪುರ ಮಾರ್ಗವಾಗಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ಈ ಅವಘಡ ಸಂಭವಿಸಿರಬಹುದೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. .