ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಸುಂದರ್‌ಗಢ್ ಜಿಲ್ಲೆಯಲ್ಲಿ ಟ್ರಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಗಾಯಕನಪಾಲಿ ಪ್ರದೇಶದ ಬಳಿ ಕಾರು ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ದಟ್ಟ ಮಂಜಿನಿಂದ ಅಪಘಾತ ಸಂಭವಿಸರಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.
ಮೃತರು ಜಿಲ್ಲೆಯ ಕಂದಗೋಡ ಮತ್ತು ಸಮರ್ಪಿಂಡ ಗ್ರಾಮಗಳಿಗೆ ಸೇರಿದವರು ಎಂದು ಹೇಳಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.