ಹೊಸದಿಗಂತ ಡಿಜಿಟಲ್ ಡೆಸ್ಕ್:
ದಂಪತಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಸಾವನ್ನಪ್ಪಿ, ಪತ್ನಿ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಪತಿ ವೆಂಕಟರಮಣಾಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ಪತ್ನಿ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.