ದಿಗಂತ ವರದಿ ಹಾಸನ :
ಇನೋವಾ ಕಾರು ಹಾಗೂ ಕಂಟೇನರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇನ್ನೊವಾ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿ ಉಳಿದ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ರಾಷ್ಟ್ರೀಯ ಹೆದ್ದಾರಿ 75 ರ, ಕೆಂಪುಹೊಳೆ ಸಮೀಪ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು ಮೂಲದ ಶಫೀಕ್ (20) ಹಾಗೂ ಸಫಿಯಾ (50) ಮೃತ ದುರ್ದೈವಿಗಳು. ಮಂಗಳೂರಿನಿಂದ ಬೆಂಗಳೂರು ಕಡೆಗೆ KA-19-AE-3770 ನಂಬರ್‌ನ ಕಂಟೇನರ್ ಲಾರಿ ತೆರಳುತ್ತಿತ್ತು. ಬೆಂಗಳೂರಿನಿಂದ ಮಂಗಳೂರು ಕಡೆಗೆ KA-19-MD-3086 ಇನೋವಾ ಕಾರು ತೆರಳುವ ವೇಳೆ ಕೆಂಪುಹೊಳೆ ಸಮೀಪ ಮುಖಾಮುಖಿ ಡಿಕ್ಕಿ ನಡೆದಿದೆ.
ಗಾಯಾಳುಗಳನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದುಣ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.