ಹೊಸದಿಗಂತ ಡಿಜಿಟಲ್ ಡೆಸ್ಕ್:
ವೇಗವಾಗಿ ಬಂದ ಕಾರು ಮಾರುಕಟ್ಟೆಯಲ್ಲಿ ಸೇರಿದ್ದ 15 ಜನರಿಗೆ ಡಿಕ್ಕಿ ಹೊಡೆದಿದೆ, ಓರ್ವ ಮಹಿಳೆ ತಕ್ಷಣವೇ ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಿಲ್ಲಿಯ ಗಾಜಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅವರಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಚಾಲಕನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಚಾಲಕ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಘಟನೆಯ ವೇಳೆ ಮಾರುಕಟ್ಟೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಮಾರುಕಟ್ಟೆಯಲ್ಲಿ ಅತಿ ವೇಗವಾಗಿ ಕಾರನ್ನು ಚಲಾಯಿಸಿರುವುದು ವೀಡಿಯೊದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
STORY | 22-year-old woman killed after car mows down people in Delhi
READ: https://t.co/t6fkhLgn0L
VIDEO: pic.twitter.com/rkyg6LGWyP
— Press Trust of India (@PTI_News) March 13, 2024