ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲೆಕ್ಟ್ರಾನಿಕ್ ಸಿಟಿ ಟು ಸಿಲ್ಕ್ ಬೋರ್ಡ್ ಪ್ಲೈ ಓವರ್ ಮೇಲೆ ಓವರ್‌ಟೇಕ್ ಮಾಡಲು ಹೋಗಿ ಫ್ಲೈಓವರ್ ತಡೆಗೋಡೆಗೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ತಂಜಿಮ್ (22), ತಾಂಜೆ (25), ಮಹಮ್ಮದ್ ಸಾಹಿಲ್ (25), ಅಬ್ದುಲ್ (23) ಹಾಗೂ ಮಹಮ್ಮದ್ ಸಿದ್ದಾರ್ ಟ್ರಿಪ್ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಅಪಘಾತದ ಸಮಯದಲ್ಲಿ ಓಪನ್ ಆಗಿದ್ದರಿಂದ ಕಾರಿನಲ್ಲಿದ್ದ ಐವರು ಅಪಾಯದಿಂದ ಪಾರಾಗಿದ್ದಾರೆ, ಆದರೆ ಇತರ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಎಲೆಕ್ಟ್ರಾನಿಕ್ ಸಿಟಿಯ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸಂಜಯ್ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ.