ಹೊಸದಿಗಂತ ಡಿಜಿಟಲ್ ಡೆಸ್ಕ್:
ಗದಗ-ಹುಬ್ಬಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ 63ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸದ್ಯ ಅಪಘಾತ ನಡೆದ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಗುರುತು ಇನ್ನು ಪತ್ತೆ ಹಚ್ಚಲಾಗುತ್ತಿದೆ. ಕಾರಿನಲ್ಲಿದ್ದವರು ಹುಬ್ಬಳ್ಳಿಗೆ ಹೊರಟಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಪ್ರಾರ್ಥಮಿಕ ವರದಿ ತಿಳಿಸಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.