ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಸವಣೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅತೀ ವೇಗದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ನೀಲಪ್ಪ ಮೂಲಿಮನಿ ಹಾಗೂ ಸುದೀಪ್ ಕೋಟಿ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ಕೆಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.