ಹೊಸದಿಗಂತ ಡಿಜಿಟಲ್ ಡೆಸ್ಕ್:
ಮರಕ್ಕೆ ಕಾರು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಭೀಕರ ಘಟನೆ ಪುಣಜನೂರು ಚೆಕ್‌ಪೋಸ್ಟ್ ಬಳಿ ನಡೆದಿದೆ.
ಮೈಸೂರು ಮೂಲದ ನಂದನ್ (24), ಜೀವನ್ (25) ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಅಡ್ಡಾದಿಡ್ಡಿ ಚಲಾಯಿಸಿದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಚಾಮರಾಜನಗರ ಪೂರ್ವ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.