ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪುವಿನ ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪ ಭೀಕರ ಅಪಘಾತ ಸಂಭಿಸಿದ್ದು, ಕಾರು ಚಾಲಕನೋರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತದ ಸಂಭವಿಸಿದೆ.
ಕಾರು, ಲಾರಿ, ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾನೆ.
ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ್ದಾರೆ. ಪರಿಣಾಮ ಹಿಂಭಾಗದಲ್ಲಿದ್ದ ಬಸ್ಸು ಕಾರಿಗೆ ಡಿಕ್ಕಿ ಹೊಡೆದ ಕಾರಣ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಉಳಿದ ವಾಹನಗಳ ಹಿಂಭಾಗಕ್ಕೆ ಹಾನಿಯಾಗಿದೆ. ಅಪ್ಪಚ್ಚಿಯಾದ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಆತ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಎಲ್ಲಾ ವಾಹನಗಳಲ್ಲಿದ್ದ ಐದು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.