ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ.
ಬಿಎನ್ಎಸ್ ಕಾಯ್ದೆಯಡಿ ಸೆಕ್ಷನ್ 108, 352, 351 ಹಾಗೂ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಸುಧಾಕರ್ ಮಾತ್ರವಲ್ಲ, ಮೃತ ಬಾಬು ಡೆ*ತ್ನೋಟ್ನಲ್ಲಿ ಉಲ್ಲೇಖಿಸಿರುವ ನಾಗೇಶ್ ಮತ್ತು ಮಂಜುನಾಥ್ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಬಿಜೆಪಿ ಸಂಸದ ಸುಧಾಕರ್ ಎ1 ಆಗಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಭಾಪೂಜಿನಗರ ನಿವಾಸಿಯಾಗಿರೋ ಈ ಬಾಬು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಗೆ ಚಾಲಕನಾಗಿದ್ದ. ದುರಾದೃಷ್ಟ ಅಂದ್ರೆ ತಾನು ಕೆಲಸ ಮಾಡ್ತಿದ್ದ ಜಿಲ್ಲಾಡಳಿತ ಭವನದ ಆವರಣದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಈ ಬಾಬು ಆತ್ಮ*ಹತ್ಯೆಗೆ ಶರಣಾಗಿದ್ದಾನೆ.