ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರೊಂದು ಫ್ಲೈಓವರ್‌ನಿಂದ ರೈಲ್ವೇ ಹಳಿಗೆ ಬಿದ್ದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ 7:30ರ ಸುಮಾರಿಗೆ ನಾಗ್ಪುರದ ಬೋರ್ಖೆಡಿ ಫ್ಲೈಓವರ್ ಮೇಲೆ ಕಾರು ಚಲಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತಿ ವೇಗದಲ್ಲಿ ಕಾರು ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಬುಟಿಬೋರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತನಿಖೆಯ ಬಳಿಕ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.