ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡ್ನ ತೆಹ್ರಿ ಜಿಲ್ಲೆಯ ಯಮುನಾ ಸೇತುವೆ ಬಳಿ ಕಾರೊಂದು ಕಾಲುವೆಗೆ ಬಿದ್ದು ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
200 ಕಿ.ಮೀ ದೂರದ ಆಸ್ಪತ್ರೆಗೆ ಗರ್ಭಿಣಿ ಮಹಿಳೆಯನ್ನು ಕರೆದೊಯ್ಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಉರುಳಿದೆ. ಈ ಕಾಲುವೆಯ ಆಳ 500 ಮೀಟರ್ ಇತ್ತು ಎಂದು ಹೇಳಲಾಗುತ್ತಿದೆ. ಇದರಿಂದ ಕಾರಿನಲ್ಲಿದ್ದ ಗರ್ಭಿಣಿ ಹಾಗೂ ಆಕೆಯ ಪತಿ ಸೇರಿದಂತೆ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.