ನಾಲೆಗೆ ಉರುಳಿ ಬಿದ್ದ ಕಾರು: ಓರ್ವ ಮೃತ್ಯು, ಮತ್ತೋರ್ವನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಡೆಗೋಡೆ ಇಲ್ಲದ ಕಾರಣ ಕಾರು ಕಾಲುವೆಗೆ ಬಿದ್ದು ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿ. ಮತ್ತೊಬ್ಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಮಂಡ್ಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದ ಬಳಿ ನಡೆದಿದೆ.

25 ಅಡಿ ಆಳದ ಕಂದಕಕ್ಕೆ ಕಾರು ಉರುಳಿದೆ. ಕಾರು ಮೇಲಿನಿಂದ ಬಿದ್ದಿದ್ದು ಸಂಪೂರ್ಣ ಜಖಂ ಆಗಿದೆ.

ವಿಸಿ ನಾಲೆಯಲ್ಲಿ ಪದೇ ಪದೇ ದುರಂತಗಳು ನಡೆಯುತ್ತಿದ್ದರೂ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳದಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಉರುಳಿದೆ. ಕಾವೇರಿ ನೀರಾವರಿ ನಿಗಮ ಹಲವು ದಿನಗಳಿಂದ ಕಾಲುವೆಗಳಲ್ಲಿ ನೀರು ಹರಿಸುವುದನ್ನು ನಿಲ್ಲಿಸಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!