ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು, ಓರ್ವ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂಬಳೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದೆ. ಅಪಘಾತದ ಪರಿಣಾಮ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಓರ್ವ ಸಾವನ್ನಪ್ಪಿದ್ದಾನೆ.

ಮೃತರನ್ನು ದಿನೇಶ್ ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರಿಗೆ ಹೋಗಿ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಷ್ಟರಲ್ಲಾಗಲೇ ಕಾರಿನಲ್ಲಿ ನೀರು ತುಂಬಿಕೊಂಡಿದ್ದು, ಒಳಗಿದ್ದ ಚಾಲಕ ಹೊರಬಂದಿದ್ದು, ಎರಡನೆಯವನು ಹೊರಬರುವಷ್ಟರಲ್ಲಿ ಮೃತಪಟ್ಟಿದ್ದಾನೆ.

ಕಳೆದ ಕೆಲ ದಿನಗಳಿಂದ ಗ್ರಾಮದ ಸುತ್ತಮುತ್ತ ಮಳೆಯಾಗುತ್ತಿದ್ದು, ಕೆರೆಯಲ್ಲಿ ನೀರು ಹೆಚ್ಚಿದೆ. ಅಗ್ನಿಶಾಮಕ ದಳದವರು ಶವ ಮತ್ತು ಕಾರನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!