ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಕಾಶ್ಮೀರದಲ್ಲಿ ಅಮರನಾಥ ಯಾತ್ರೆ ಸಮೀಪದ ಝೋಜಿಲ್ ಪಾಸ್ ಬಳಿ ಕಾರು ಪ್ರಪಾತಕ್ಕೆ ಬಿದ್ದು ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿದ್ದಾರೆ.
ಮಧ್ಯ ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಜೋಜಿಲಾ ಪಾಸ್ನಲ್ಲಿ ನಡೆದಿದೆ. ಚಾಲಕ ಹ್ಯಾಂಡ್ ಬ್ರೇಕ್ ಹಾಕದೇ ಇಳಿದು ಹೋಗಿದ್ದರಿಂದ ಕಾರು ತನ್ನಷ್ಟಕ್ಕೆ ತಾನೇ ಮೂವ್ ಆಗಿ ಕಂದಕಕ್ಕೆ ಉರುಳಿಬಿದ್ದಿದೆ.
ಆಳವಾದ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಬೆಂಗಳೂರಿನ ಚಂಪಕ್ ದಾಸ್ (67), ತಾಂಡ್ರಾ ದಾಸ್ (44) ಮತ್ತು ಮೊನಾಲಿಶಾ ದಾಸ್ (41) ಎಂದು ಗುರುತಿಸಲಾಗಿದೆ.