ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು: 5 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗದಿಂದ ಶಿವಮೊಗ್ಗ ಜಿಲ್ಲೆ ಸಾಗರಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಬಳಿಯ ಹಳ್ಳಕ್ಕೆ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಮಹಿಳೆ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಶಿವಮೊಗ್ಗ ಸಮೀಪದ ಆಯನೂರು ಬಳಿ ಸ್ಕ್ರಿಫ್ಟ್ ಡಿಸೈರ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಪಕ್ಕದ ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ.

ಮೂವರು ಮಹಿಳೆಯರು, ಓರ್ವ ಬಾಲಕ ಹಾಗೂ ಕಾರಿನ ಚಾಲಕ ಗಾಯಗೊಂಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!