Wednesday, November 30, 2022

Latest Posts

ಕಂದಕಕ್ಕೆ ಉರುಳಿದ ಕಾರ್: ಜಮ್ಮು ಕಾಶ್ಮೀರದಲ್ಲಿ ಮೂವರು ಅಧಿಕಾರಿಗಳ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸ್ಕಿಡ್ ಆದ ಕಾರು ಕಂದಕಕ್ಕೆ ಬಿದ್ದಿದ್ದು, ಮೂವರು ಅಧಿಕಾರಿಗಳು ಮೃತಪಟ್ಟಿದ್ದಾರೆ.

ರಸ್ತೆ ಮತ್ತು ಕಟ್ಟಡ ಇಲಾಖೆಯ ತಂಡದ ಅಧಿಕಾರಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಭಾರೀ ಮಳೆಯಿದ್ದ ಕಾರಣ ವಾಹನ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಫೀಕ್ ಶಾ, ಕಮಲ್ ಕಿಶೋರ್ ಶರ್ಮಾ ಹಾಗೂ ಮೊಹಮ್ಮದ್ ಹಫೀಜ್ ಮೃತರು. ಸುರೇಶ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!