SHOCKING NEWS: ಕಾರಿನ ಗಾಜು ಒಡೆದು ಹಣ ಲಪಟಾಯಿಸಿದ ಕಳ್ಳರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ಇರುವ ರಾಧ ಮೆಡಿಕಲ್ಸ್ ನ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಹಣ ಕಳವು ಗೈದ ಘಟನೆ ಗುರುವಾರ ರಾತ್ರಿ ನಡೆದಿದೆ.

ಜನನಿಬಿಡ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಕಳ್ಳರು ನಿಲ್ಲಿಸಿದ್ದ ಕಾರಿನ ಮುಂಭಾಗ, ಚಾಲಕನ ಸೀಟಿನ ಬದಿಯ ಗಾಜನ್ನು ಒಡೆದು ಸುಮಾರು 40,000 ರೂ ಎಗರಿಸಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ.

ಸ್ಥಳಕ್ಕೆ ಉಡುಪಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!