Wednesday, October 5, 2022

Latest Posts

ನಿಯಂತ್ರಣ ತಪ್ಪಿ ವಿಭಜಕಕ್ಕೆ ಕಾರು ಡಿಕ್ಕಿ: ಮೂವರು ಸಾವು

ಹೊಸದಿಗಂತ ವರದಿ ಹುಬ್ಬಳ್ಳಿ:

ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ ಪಲ್ಟಿಯಾದ ಪರಿಣಾಮ ಚಾಲಕ ಹಾಗೂ ಮಹಿಳೆ ಸೇರಿ ಮೂವರು ಮೃತಪಟ್ಟ ಘಟನೆ ತಾಲೂಕಿನ ವರೂರು ಗ್ರಾಮದ ಗಣೇಶ ಹೋಟೆಲ್ ಬಳಿ ನಡೆದಿದೆ.

ಮಂಗಳವಾರ ತಡರಾತ್ರಿ ಈ ಅವಘಡ ನಡೆದಿದ್ದು, ದಾವಣಗೆರೆ ಮೂಲದ ಚಾಲಕ ಶಾರೂಖ (27), ಸೊಹೇಲ್ (26), ಚಿಕ್ಕಮಗಳೂರು ಜಿಲ್ಲೆ ಆಲದೂರಿನ ಎಚ್.ಕೆ. ಸುಶೀಲಾ (35) ಮೃತಪಟ್ಟಿದ್ದಾರೆ ಹಾಗೂ ಇನ್ನೋರ್ವ ಗಾಯಗೊಂಡಿದ್ದಾನೆ.

ದಾವಣಗೆರೆಯಿಂದಅವಲಕ್ಕಿ ವ್ಯಾಪಾರ ಮಾಡಿಕೊಂಡು ರಾತ್ರಿ ಹುಬ್ಬಳ್ಳಿ ಕಡೆಗೆ ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಾಗ ಸೊಹೇಲ್ ಸ್ಥಳದಲ್ಲೆ ಮೃತಪಟ್ಟರೆ, ಗಂಭೀರ ಗಾಯಗೊಂಡಿದ್ದ ಚಾಲಕ ಮತ್ತು ಮಹಿಳೆ ಕಿಮ್ಸ್ ಗೆ ದಾಖಿಲಿಸಿದ ಸ್ವಲ್ಪ ಸಮಯದಲ್ಲೇ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ‌.

ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!