ಹೊಸದಿಗಂತ ವರದಿ,ನಾಗಮಂಗಲ :
ಕಾರು ಮತ್ತುಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ದಂಪತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಚಾಮರಾಜನಗರ ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಅಂಚೆಚಿಟ್ಟನಹಳ್ಳಿ ಸಮೀಪ ಭಾನುವಾರ ಸಂಭವಿಸಿದೆ.
ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಸಿದ್ದಣ್ಣ(65) ಮತ್ತು ಶೀಲ (55) ಎಂಬುವರೇ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ದಂಪತಿಯಾಗಿದ್ದಾರೆ.
ಗುಬ್ಬಿಯಿಂದ ನಾಗಮಂಗಲ ಮಾರ್ಗವಾಗಿ ಶ್ರೀರಂಗಪಟ್ಟಣದ ನಿಮಿಷಾಂಬ ದೇವಸ್ಥಾನಕ್ಕೆ ಹೋಗಿಬರುವ ಸಲುವಾಗಿ ಸಿದ್ದಣ್ಣ ತಮ್ಮ ಪತ್ನಿ ಹಾಗೂ ಪುತ್ರನೊಂದಿಗೆ ಕ್ರೇಟಾ (ಕೆಎ05 ಎನ್‌ಬಿ 2525) ಕಾರಿನಲ್ಲಿ ತೆರಳುತ್ತಿದ್ದರು. ಇದೇ ವೇಳೆ ಮೈಸೂರಿನಿಂದ ಬೆಳ್ಳೂರು ಕಡೆಗೆ ಸರಕು ತುಂಬಿದ ಬೊಲೆರೋ ಗೂಡ್ಸ್ ವಾಹನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಸಿದ್ದಣ್ಣ ದಂಪತಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಕಾರು ಚಾಲನೆ ಮಾಡುತ್ತಿದ್ದ ಪುತ್ರ ಯಶಸ್‌ಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಎರಡೂ ವಾಹನಗಳನ್ನು ವಶಕ್ಕೆ ಪಡೆದುಕೊಂಡಿರುವ ಗ್ರಾಮಾಂತರ ಠಾಣೆಯ ಪೊಲೀಸರು ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.