ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮರಕ್ಕೆ ಕಾರು ಡಿಕ್ಕಿ: ಇಬ್ಬರು ರೈತ ಮುಖಂಡರ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಚಿಕ್ಕಮಗಳೂರು:

ನಗರ ಹೊರವಲಯದ ಮೌಂಟೆನ್ ವ್ಯೂ ಶಾಲೆ ಬಳಿ ತರೀಕೆರೆ-ಬಿಳಿಕೆರೆ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಇಬ್ಬರು ರೈತ ಮುಖಂಡರು ಸಾವಪ್ಪಿದ್ದಾರೆ.
ರಾಜ್ಯ ರೈತ ಸಂಘದ ಉಪಾಧ್ಯಕ್ಷ ಬೇಲೂರು ತಾಲ್ಲೂಕು ಅರೇಹಳ್ಳಿಯ ರಾಮಸ್ವಾಮಿ(70) ಹಾಗೂ ರಾಜ್ಯ ರೈತ ಸಂಘದ ಕಾರ್ಯದರ್ಶಿ ಬೇಲೂರಿನ ರಾಮ(55) ಮೃತ ದುರ್ದೈವಿಗಳಾಗಿದ್ದಾರೆ.
ನವಲಗುಂದದಿಂದ ಇನ್ನೋವಾ ಕಾರಿನಲ್ಲಿ ತರೀಕೆರೆ-ಲಿಂಗದಹಳ್ಳಿ-ಚಿಕ್ಕಮಗಳೂರು ಮಾರ್ಗವಾಗಿ ಬೇಲೂರಿಗೆ ವಾಪಾಸಾಗುವಾಗ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು, ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss