ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ದೂರಿನ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಟಯರ್ ಸ್ಫೋಟಗೊಂಡು ಡಿವೈಡರ್ಗೆ ಡಿಕ್ಕಿ ಹೊಡೆದ ಬಳಿಕ ನಾಲ್ಕೈದು ಬಾರಿ ಪಲ್ಟಿಯಾಗಿ ಭೀಕರ ಅಪಘಾತ ನಡೆದಿದೆ.
ಪ್ರಯಾಣಿಕರು ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದರು. ಆ ವೇಳೆ ಮದ್ದೂರು ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದು ನಾಲ್ಕೈದು ಬಾರಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿ ಹೊಡೆದು ಕಾರು ಸಂಪೂರ್ಣ ಜಖಂಗೊಂಡಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.