March 22, 2026
Sunday, March 22, 2026
spot_img

ರಸ್ತೆಬದಿ ನಿಂತಿದ್ದ ಲಾರಿಗೆ ಕಾರ್‌ ಡಿಕ್ಕಿ: ಮಂತ್ರಾಲಯಕ್ಕೆ ಹೋಗುತ್ತಿದ್ದ ಮೂವರು ಸಾ*ವು


ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಬಳಿ ಭೀಕರ ಸಪಗಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದ್ದು, ಮಂತ್ರಾಲಯದಿಂದ ಬರುತ್ತಿದ್ದ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಒಂದೇ ಕುಟುಂಬದ ಐವರು ಮಂತ್ರಾಲಯಕ್ಕೆ ತೆರಳಿದ್ದರು. ರಾಯರ ದರುಶನ ಪಡೆದು ನಂತರ ಕುಣಿಗಲ್‌ಗೆ ವಾಪಾಸಾಗಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಚಾಲಕ ಅಜಾಗರೂಕತೆಯಿಂದ ಹಾಗೂ ಅತಿವೇಗದಲ್ಲಿ ಕಾರನ್ನು ಓಡಿಸುತ್ತಿದ್ದರು ಎನ್ನಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಲ್ಲಿದ್ದ ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹ ಮೂರ್ತಿ (38), ಗಂಗಾಧರ್ (35),ಲೋಹಿತ್ (40) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನು ಡಿಕ್ಕಿಯ ರಭಸಕ್ಕೆ ಕಾರಿನ ಚಾಲಕನ ಬದಿಯಲ್ಲಿ ಕುಳಿತಿದ್ದವರ ತಲೆ ಕಟ್ ಆಗಿದೆ.

ಉಳಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಚಳ್ಳಕೆರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !