ಕಾರಿನಲ್ಲಿ ಸ್ಟಂಟ್‌ ಮಾಡಲು ಹೋಗಿ ಯಡವಟ್ಟು: ಡಿವೈಡರ್‌ ಹಾರಿದ ಕಾರಿನ ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಿನಿಮಾಗಳಲ್ಲಿ ಮಾಡುವಂತಹ ಸ್ಟಂಟ್‌ಗಳನ್ನು ನಿಜ ಜೀವನದಲ್ಲಿ ಮಾಡಲು ಸಾಧ್ಯವಿಲ್ಲ. ಹಾಗೆ ಮಾಡಲು ಹೋಗಿ ಅನೇಕ ಜನರು ತಮ್ಮ ಪ್ರಾಣವನ್ನು ತೆಗೆದುಕೊಳ್ಳುತ್ತಿದ್ದಾರೆ. ಬೈಕ್, ಕಾರುಗಳಲ್ಲಿ ಸ್ಟಂಟ್ ಮಾಡಬೇಡಿ ಎಂದು ಪೊಲೀಸರು ಎಚ್ಚರಿಕೆ ನೀಡುತ್ತಿದ್ದರೂ ಕ್ಯಾರೆ ಅನ್ನದೆ ಜೀವಕ್ಕೆ ಹಾನಿ ಮಾಡಿಕೊಳ್ಳುತ್ತಿದ್ದಾರೆ.

ಕಾರಿನಲ್ಲಿ ಸ್ಟಂಟ್ ಮಾಡಲು ಯತ್ನಿಸಿದ್ದ ಚಾಲಕ ಪರಿಣಾಮವಾಗಿ ಕಾರು ಅಪಘಾತಕ್ಕೀಡಾಗಿದೆ. ಈ ಘಟನೆ ಹಿಮಾಚಲ ಪ್ರದೇಶದ ಸೋಲನ್‌ನಲ್ಲಿ ನಡೆದಿದೆ. ಅಮೃತಸರದ ವ್ಯಕ್ತಿಯೊಬ್ಬರು ಸೋಲನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 5 ರಲ್ಲಿ ಕಾರು ಚಾಲನೆ ಮಾಡುವಾಗ ಸಾಹಸ ಪ್ರದರ್ಶಿಸಲು ಪ್ರಯತ್ನಿಸಿ ಡಿವೈಡರ್‌ ದಾಟಿ ಪಕ್ಕದ ರಸ್ತೆಯಲ್ಲಿ ಅಪಘಾತಕ್ಕೀಡಾಗಿರುವ ವಿಡಿಯೋ ವೈರಲ್‌ ಆಗಿದೆ. ಈ ಘಟನೆಯಲ್ಲಿ ಕಾರಿಗೆ ಭಾರೀ ಹಾನಿಯಾಗಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!