Friday, March 31, 2023

Latest Posts

ಮೈಸೂರು-ಬೆಂಗಳೂರು ಹೈವೇಯಲ್ಲಿ ಕಾರು-ಲಾರಿ ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ.
ರಾಮನಗರ ತಾಲೂಕಿನ ಬಸವನಪುರ ಬಳಿ ಮೇಲ್ಸೇತುವೆಯ ತಡೆಗೋಡೆಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ.

ಕಾರ್ ಹಾಗೂ ಲಾರಿ ಚಾಲಕರು ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎರಡೂ ವಾಹನಗಳು ಜಖಂಗೊಂಡಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.

ದಶಪಥದಲ್ಲಿ ವಾಹನಗಳು ಅತೀ ಸ್ಪೀಡ್‌ನಲ್ಲಿ ಇರುವ ಕಾರಣ ದುರ್ಘಟನೆಗಳು ಸಂಭವಿಸುತ್ತಲೇ ಇರುತ್ತವೆ. ವೇಗ ಮಿತಿಯ ಸೂಚನಾ ಫಲಕಗಳನ್ನು ಶೀಘ್ರವೇ ಅಳವಡಿಸಬೇಕು, ಅಪಘಾತ ತಡೆಗೆ ಮುನ್ನೆಚ್ಚರಿಕೆ ಕ್ರಮವನ್ನು ಅಳವಡಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!