ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಗ್ರದ ತಂಜ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಡಿಗ್ನೇರ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಥಳದಲ್ಲೇ ಮೃತಪಟ್ಟಿದ್ದಾರೆ.
ಮದುವೆ ಮನೆಗೆ ತೆರಳಿದ್ದ ಒಂದೇ ಕುಟುಂಬದ ಆರು ಮಂದಿ ಇದ್ದ ಕಾರಿನ ಸ್ಪೀಡ್ ಹೆಚ್ಚಾಗಿತ್ತು. ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ಕಾಲುವೆಗೆ ಬಿದ್ದಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಶುಕ್ರವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಮೃತರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.