ಕಾರು ಪಲ್ಟಿಯಾಗಿ ಭೀಕರ ಅಪಘಾತ: ಐವರು ಮೃತ್ಯು, ಓರ್ವನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಸಿರೋಹಿಯಲ್ಲಿ ಟೈರ್‌ ಸ್ಫೋಟಗೊಂಡ ಪರಿಣಾಮ ಕಾರು ಬ್ಯಾಲೆನ್ಸ್‌ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಐವರು ಸಾವನ್ನಪ್ಪಿದ್ದು, ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ಎಸ್‌ಪಿ ಸಿರೋಹಿ ಅನಿಲ್‌ ಕುಮಾರ್‌ ತಿಳಿಸಿದ್ದಾರೆ.

ಪ್ರಯಾಣಿಕರು ಗುಜರಾತ್‌ನಿಂದ ರಾಜಸ್ಥಾನದ ಜೋಧ್‌ಪುರಕ್ಕೆ ಹೋಗುತ್ತಿದ್ದಾಗ ಸಿರೋಹಿಯ ಸರ್ನೇಶ್ವರ ಸೇತುವೆ ಬಳಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದ್ದು, ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಷಯದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!