ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿದ ಘಟನೆ ಬೇಲೂರು ತಾಲೂಕಿನ ಕೊರಟಗೆರೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ದಯಾನಂದ (46) ಎಂದು ಗುರುತಿಸಲಾಗಿದೆ. ಇನ್ನೂ ಅಪಘಾತದಲ್ಲಿ ದಯಾನಂದ್ ಅವರ ಮಗಳು ನಿಶ್ಮಿತಾ (16) ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆಯನ್ನು ಬೇಲೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಯಾನಂದ್ ಅವರು ಬೇಲೂರಿನಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದು ಅಲ್ಲೇ ವಾಸವಿದ್ದರು. ಇನ್ನೂ ಭಾನುವಾರ ಚಿಕ್ಕಮಗಳೂರಿಗೆ ತೆರಳಿದ್ದ ಅವರು ಇಂದು ಮಗಳೊಂದಿಗೆ ಚಿಕ್ಕಮಗಳೂರಿನಿಂದ ಬೇಲೂರಿಗೆ ಬರುತ್ತಿದ್ದರು. ಈ ವೇಳೆ ಈ ಕಾರು ಪಲ್ಟಿಯಾಗಿ ರಸ್ತೆ ಪಕ್ಕದಲ್ಲಿದ್ದ ಅಡಿಕೆ ತೋಟಕ್ಕೆ ಬಿದ್ದಿದೆ.