ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಸಮಸ್ತಿಪುರದಲ್ಲಿ ಧಾರ್ಮಿಕ ಸಭೆಗೆ ತೆರಳುತ್ತಿದ್ದ ಜನರ ಗುಂಪಿನ ಮೇಲೆ ಕಾರೊಂದು ನುಗ್ಗಿದ ಪರಿಣಾಮ 15 ಜನರಿಗೆ ಗಂಭೀರ ಗಾಯಗಳಿದ್ದು, ಅವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಸೋಮವಾರ ಈ ದುರ್ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಸಮಸ್ತಿಪುರ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದರಿಂದ ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಡಿಎಂಸಿಎಚ್‌ಗೆ ಕಳುಹಿಸಲಾಗಿದೆ.
ಪೊಲೀಸರ ಪ್ರಕಾರ, ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಜಿತ್ವಾರ್‌ಪುರದಲ್ಲಿರುವ ಕನ್ಹಯ್ಯಾ ಚೌಕ್ ಬಳಿ ಈ ಘಟನೆ ನಡೆದಿದೆ. ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಲು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಜನ ಸೇರಿದ್ದರು. ಹಠಾತ್ತನೆ ನಿಯಂತ್ರಣ ತಪ್ಪಿದ ಕಾರು ಜನರ ಮೇಲೆ ನುಗ್ಗಿದ ಪರಿಣಾಮ ದುರಂತ ಸಂಭವಿಸಿದೆ. ಅಪಘಾತದ ನಂತರ ಸ್ಥಳದಲ್ಲಿ ನೂಕುನುಗ್ಗಲಿನ ಪರಿಸ್ಥಿತಿ ನಿರ್ಮಾಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.