ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನ ಲೇಡಿಹಿಲ್ ಬಳಿ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಮಂದಿಗೆ ಕಾರು ಡಿಕ್ಕಿಯಾಗಿ ಓರ್ವ ಯುವತಿ ಮೃತಪಟ್ಟ ಘಟನೆ ನಡೆದಿದೆ.
ರೂಪಶ್ರೀ (23) ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಸ್ವಾತಿ(26) ಹಿತಾನ್ವಿ(16), ಕೃತಿಕಾ(16), ಯತಿಕಾ912) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರು ಮಣ್ಣಗುಡ್ಡ ಕಡೆಯಿಂದ ಲೇಡಿಹಿಲ್ ಕಡೆಗೆ ಅತೀ ವೇಗ ಮತ್ತು ನಿರ್ಲಕ್ಷ್ಯದ ದ ಚಾಲನೆಯೊಂದಿಗೆ ಬಂದಿದ್ದು ಫುಟ್ ಪಾತಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರ ಮೇಲೆ ಹಾರಿಸಿಕೊಂಡು ಹೋಗಿದ್ದಾನೆ.
ಅಪಘಾತ ನಡಸಿದ ಬಳಿಕ ಸ್ಥಳದಿಂದ ಕಾರು ಸಮೇತ ಪರಾರಿಯಾಗಿದ್ದ ಚಾಲಕ ಕಮಲೇಶ್ ಬಲದೇವ್ ಕಾರನ್ನು ಹೋಂಡಾ ಶೋ ರೂಂ ಬಳಿ ನಿಲ್ಲಿಸಿ ಮನೆಗೆ ಹೋಗಿದ್ದಾನೆ. ಬಳಿಕ ತಂದೆ ಹೆಚ್‌ಎಂ ಬಲದೇವ್ ಅವರೊಂದಿಗೆ ಪಶ್ಚಿಮ ಸಂಚಾರಿ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.