ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ರಾಮಲಿಂಗಾಪುರ ಗ್ರಾಮದ ಬಳಿ ಇಂದು ನಡೆದಿದೆ.
ವೀರಾಪುರ ಗ್ರಾಮದ ಯಮುನಾ, ದೊಡ್ಡಣ್ಣ, ಸಣ್ಣಮ್ಮ ಮೃತದುರ್ದೈವಿಗಳು. ಪ್ರವೀಣ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರವೀಣ್ ಪತ್ನಿ ಯಮುನಾ, ಮಾವ ದೊಡ್ಡಣ್ಣ, ಅತ್ತೆ ಸಣ್ಣಮ್ಮ ಕುಟುಂಬ ಸಮೇತರಾಗಿ ಇಂದು ಮುಂಜಾನೆ ಮಾರುತಿ ಆಲ್ಟೋ ಕಾರಿನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿರುವ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿದೆ.
ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.