ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, August 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆಂಬ್ಯುಲೆನ್ಸ್ ಗೆ ದಾರಿ ಬಿಡದೆ ಅಮಾನವೀಯವಾಗಿ ವರ್ತಿಸಿದ ಕಾರು ಚಾಲಕನ ಬಂಧಿಸಿದ ಪೊಲೀಸರು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ,ಮಂಗಳೂರು:

ತುರ್ತು ಚಿಕಿತ್ಸೆಗಾಗಿ ರೋಗಿಯೊಬ್ಬರನ್ನು ಆಂಬ್ಯುಲೆನ್ಸ್ ನಲ್ಲಿ ಸಾಗಿಸುತ್ತಿದ್ದಾಗ ಕಾರು ಚಾಲಕನೊಬ್ಬ ಆಂಬ್ಯುಲೆನ್ಸ್ ಗೆ ದಾರಿ ಬಿಡದೆ ಸತಾಯಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಾರು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.
ಉಳ್ಳಾಲ ಸಮೀಪದ ಕೋಟೆಕಾರು ನಿವಾಸಿ ಚರಣ್ ರಾಜ್(28)ಬಂಧಿತ.
ಸೋಮವಾರ ಸಂಜೆ ರೋಗಿಯೊಬ್ಬರನ್ನು ಕಣಚೂರು ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ಆಂಬ್ಯುಲೆನ್ಸ್ ನಲ್ಲಿ ಸಾಗಿಸಲಾಗುತ್ತಿತ್ತು. ದಾರಿ ಮದ್ಯೆ ಕಾರು ಚಾಲಕ ಚರಣ್ ರಾಜ್ ಆಂಬ್ಯುಲೆನ್ಸ್ ಗೆ ದಾರಿ ಬಿಡದೆ ಅಡ್ಡಿಪಡಿಸಿದ್ದ. ಕಾರು ಚಾಲಕ ಅಮಾನವೀಯವಾಗಿ ವರ್ತಿಸಿದ ಕುರಿತ ವೀಡಿಯೋ ವೈರಲ್ ಆಗಿದ್ದು, ಆರೋಪಿಯ ವಿರುದ್ಧ ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಯನ್ನು ಮಂಗಳವಾರ ಬಂಧಿಸಿದ್ದಾರೆ.
ಆರೋಪಿ ತಾನು ಕಾರು ಚಲಾಯಿಸುವಾಗ ಕಿವಿಯಲ್ಲಿ ಇಯರ್ ಫೋನ್ ಇಟ್ಟು ಕಾರು ಚಲಾಯಿಸುತ್ತಿದ್ದುದಾಗಿ ಎಂದು ತನಿಖೆ ವೇಳೆ ಪೊಲೀಸರಲ್ಲಿ ತಿಳಿಸಿದ್ದಾನೆ. ಸಾರಿಗೆ ನಿಯಮ ಉಲ್ಲಂಘಿಸಿ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ದು, ಮಾತ್ರವಲ್ಲದೆ ಆಂಬ್ಯುಲೆನ್ಸ್ ಗೆ ದಾರಿ ಬಿಡದ ಕಾರಣಕ್ಕಾಗಿ ದಂಡ ವಿಧಿಸಿರುವ ಪೊಲೀಸರು ಕಾರು ವಶಪಡಿಸುವುದರೊಂದಿಗೆ ಕಾನೂನು ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss