ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗೇಶ್ವರದ ರಸ್ತೆಯಿಂದ ಕಾರು ಸ್ಕಿಡ್ ಆಗಿ ಸುಮಾರು 50 ಅಡಿ ಕೆಳಗೆ ಬಿದ್ದಿದ್ದು, ಮೂರು ಮಂದಿ ಮೃತಪಟ್ಟಿದ್ದಾರೆ.
ಕಾರಿನಲ್ಲಿ ನಾಲ್ವರು ರಾಮಲೀಲಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ತಮ್ಮ ಮನೆಗಳಿಗೆ ವಾಪಾಸಾಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮೇಲಿಂದ ಬಿದ್ದಿದೆ. ವಿಜಯ್ ಸಿಂಗ್, ರೋಹಿತ್ ಸಿಂಗ್ ಹಾಗೂ ಸುನಿಲ್ ಸಿಂಗ್ ಮೃತರು. ಗಾಡಿ ಓಡಿಸುತ್ತಿದ್ದ ಮನೋಜ್ ಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕ ಕಾರಿನಲ್ಲಿ ಸಿಲುಕಿ ಹಾಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ವೇಳೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.