Monday, October 2, 2023

Latest Posts

ಕಾರು-ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು, ಮತ್ತೋರ್ವ ಗಂಭೀರ

ಹೊಸದಿಗಂತ ವರದಿ ಮಡಿಕೇರಿ:

ದ್ವಿಚಕ್ರ ವಾಹನ ಮತ್ತು ಆಲ್ಟೋ ಕಾರಿನ ನಡುವೆ ಅಪಘಾತ ಸಂಭವಿಸಿ ಯುವಕನೊಬ್ಬ ಸಾವಿಗೀಡಾದ ಘಟನೆ ನಾಪೋಕ್ಲು -ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದ ಬೊಳಿಬಾಣೆ ಎಂಬಲ್ಲಿ ನಡೆದಿದೆ.

ನಾಪೋಕ್ಲುವಿನ ಪೆಟ್ರೋಲ್ ಬಂಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಪ್ಪಾಜಿ ಅಲಿಯಾಸ್ ನವೀನ್ (19)ಮೃತ ಯುವಕ.
ಮೂರ್ನಾಡು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಮತ್ತು ಮೂರ್ನಾಡು ಕಡೆಯಿಂದ ನಾಪೋಕ್ಲುವಿಗೆ ಬರುತ್ತಿದ್ದ ಆಲ್ಟೋ ಕಾರು ಹೊದವಾಡ ಗ್ರಾಮದ ತಿರುವಿನಲ್ಲಿ ಮುಖಾಮುಖಿಯಾಗಿ ಈ ದುರ್ಘಟನೆ ಸಂಭವಿಸಿದೆ.

ದ್ವಿಚಕ್ರ ವಾಹನದಲ್ಲಿದ್ದ ಸಹ ಪ್ರಯಾಣಿಕ, ಐ. ಟಿ. ಐ ವಿದ್ಯಾರ್ಥಿ ಸುದೀಪ್ ಎಂಬವರಿಗೂ ಗಂಭೀರ ಗಾಯವಾಗಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಾಪೋಕ್ಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!