ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚಿನ ದಿನಗಳಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿರುವ ಕ್ಯಾಲ್ಸಿಯಂ ಕಾರ್ಬೈಡ್ ಗನ್ ಗಳಿಂದಾಗಿ ಬರೊಬ್ಬರಿ 60 ಮಕ್ಕಳು ಗಾಯಗೊಂಡಿದ್ದು, ಕನಿಷ್ಠ 14 ಮಕ್ಕಳು ಕಣ್ಣು ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ವ್ಯಾಪಕ ವೈರಲ್ ಆಗುತ್ತಿರುವ ಕ್ಯಾಲ್ಸಿಯಂ ಕಾರ್ಬೈಡ್ ಗನ್ ಗಳನ್ನು ಬಳಕೆ ಮಾಡಿದ್ದರಿಂದ ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ 60ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಈ ಪೈಕಿ ಕನಿಷ್ಛ 14 ಮಕ್ಕಳು ಕಣ್ಣುಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಗಾಯಾಳು ಮಕ್ಕಳನ್ನು ಭೋಪಾಲ್ ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ಹೆಚ್ಚಿನವರು 8 ರಿಂದ 14 ವರ್ಷ ವಯಸ್ಸಿನ ಮಕ್ಕಳು ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ದೀಪಾವಳಿಯ ಒಂದು ದಿನದ ನಂತರ ಭೋಪಾಲ್‌ನಾದ್ಯಂತ 150 ಕ್ಕೂ ಹೆಚ್ಚು ಕಾರ್ಬೈಡ್ ಗನ್ ಗಾಯಗಳ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ.
ಅನೇಕ ಸಂತ್ರಸ್ಥ ಮಕ್ಕಳನ್ನು ಪ್ರಥಮ ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದ್ದರೂ, ಹಲವಾರು ಮಕ್ಕಳು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂದು ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

