ಹೊಸದಿಗಂತ ವರದಿ ಶಿವಮೊಗ್ಗ :
ಗಂಡು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಶಿವಮೊಗ್ಗ ವನ್ಯಜೀವಿ ವಲಯದ ಶಂಕರ್ ವಲಯಾರಣ್ಯ ವ್ಯಾಪ್ತಿಯ ಹಾಯ್ ಹೊಳೆ ಗ್ರಾಮದಲ್ಲಿ ನಡೆದಿದೆ.
ಶನಿವಾರ ಬೆಳಗ್ಗೆ ಆನೆ ಕಳೆಬರ ಜಮೀನಿನಲ್ಲಿ ಪತ್ತೆಯಾಗಿದ್ದು, ಸ್ಥಳಿಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕಾಡಿನಿಂದ ಆಹಾರ ಅರಸಿ ಜಮೀನಿಗೆ ಬಂದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶ ದಿಂದ ಈ ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದು ಇನ್ಮಷ್ಟೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.



