ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಡ್ಲಿಯಲ್ಲಿ ಕ್ಯಾನ್ಸರ್ ಕಾರಕವಾಗಿರುವ ಕಾರ್ಸಿನೋಜೆನಿಕ್ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರ್ನಾಟಕದ ಹೊಟೇಲ್ ಗಳಲ್ಲಿ ಇಡ್ಲಿ ತಯಾರಿಕೆಗೆ ಬಳಸುವಂತ ಪ್ಲಾಸ್ಟಿಕ್ ನಿಷೇಧಿಸಲಾಗುತ್ತದೆ. ಇನ್ನೆರಡು ದಿನಗಳಲ್ಲಿ ಈ ಸಂಬಂಧ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಮಾಹಿತಿ ಹಂಚಿಕೊಂಡಿರುವ ಅವರು, ಉಪಹಾರ ಕೇಂದ್ರಗಳು ಮತ್ತು ಹೊಟೇಲ್ ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು ಎಂದಿದ್ದಾರೆ.
ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರು ಸೇವಿಸುವ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಆರೋಗ್ಯಕ್ಕೆ ಮಾರಕ ಎಂಬುದಾಗಿ ತಿಳಿಸಿದ್ದಾರೆ.