ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಯುವಪೀಳಿಗೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿದ್ದು, ಪೋಷಕರಲ್ಲಿ ಆತಂಕ ಮೂಡಿಸಿದೆ.
ಗುಜರಾತ್‌ನ ಅಮ್ರೇಲಿಯಲ್ಲಿ ಪರೀಕ್ಷೆ ಬರೆಯುತ್ತಿದ್ದ ಒಂಬತ್ತನೇ ತರಗತಿ ವಿದ್ಯಾರ್ಥಿನಿಗೆ ಹೃದಯ ಸ್ತಂಭನವಾಗಿದೆ.
ಸಾಕ್ಷಿ ರಾಜೋಸರ ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಿದ್ದು, ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ವೈದ್ಯರು ಬಾಲಕಿ ಮೃತಪಟ್ಟಿದ್ದಾಳೆ ಎಂದು ಘೋಷಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.