ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ . ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ಗಳಿದ್ದು, ಈ ಪೈಕಿ 4.50 ಕೋಟಿ ಜನರು ಫಲಾನುಭವಿಗಳಿದ್ದಾರೆ ಬಿಪಿಎಲ್ ಕಾರ್ಡ್ ಪರೀಕ್ಷರಣೆ ತೊಡಗಿದ್ದೇವೆ. ಅನರ್ಹರನ್ನು ಬಿಪಿಎಲ್ ನಿಂದ ಏಪ್ರಿಲ್ ಗೆ ಹಾಕುತ್ತೇವೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು.
ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಮಾನದಂಡ ಬಿಟ್ಟು ಪರಿಷ್ಕರಣೆ ಮಾಡಲ್ಲ. ಅನರ್ಹರು ಸ್ವಯಂ ಪ್ರೇರಿತವಾಗಿ ಬಿಬಿಎಲ್ ಕಾರ್ಡ್ ಗಳನ್ನು ಬರೆಯಿರಿ. ಹೊಸ ಬಿಪಿಎಲ್ ಕಾರ್ಡ್ದಾರರಿಗೆ ಅವಕಾಶ ಮಾಡಿಕೊಡಿ. ಅನ್ನ ಭಾಗ್ಯ ಯೋಜನೆ ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು ಅಂತ ಮನೆ ಕಟ್ಟುವವರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇರುವುದಿಲ್ಲ ಎಂದರು.