ಮಳೆಗಾಲದಲ್ಲಿ ಚರ್ಮ ಮತ್ತು ಕೂದಲಿಗೆ ವಿಶೇಷ ಕಾಳಜಿಯ ಅಗತ್ಯವಿರುತ್ತದೆ. ವಾರದಲ್ಲಿ ಎರಡರಿಂದ ಮೂರು ದಿನ ಕೂದಲು ತೊಳೆಯಬೇಕು. ನಿಮ್ಮ ಮುಖವನ್ನು ಚೆನ್ನಾಗಿ ತೊಳೆಯಿರಿ ಮತ್ತು ಒಣ ಟವೆಲ್ನಿಂದ ಒಣಗಿಸಿ.
ನಿಮ್ಮ ಬಟ್ಟೆಗಳು ಮಳೆಯಿಂದ ಒದ್ದೆಯಾಗಿದ್ದರೆ, ಒದ್ದೆಯಾದ ಬಟ್ಟೆಯಲ್ಲಿ ಹೆಚ್ಚು ಹೊತ್ತು ಇರಬೇಡಿ. ಶುದ್ಧ ನೀರಿನಲ್ಲಿ ಸ್ನಾನ ಮಾಡಿ. ಸಾಧ್ಯವಾದಷ್ಟು ಬೇಗ ಒಣ ಬಟ್ಟೆಗಳನ್ನು ಹಾಕಿ.
ಸಾಮಾನ್ಯವಾಗಿ ಮಳೆಗಾಲದಲ್ಲಿ ಬಿಸಿಯಾಗಿ ಕರಿದ ಆಹಾರವನ್ನು ತಿನ್ನಲು ಬಯಸುತ್ತಾರೆ. ಕೊಬ್ಬಿನ ತಿಂಡಿಗಳು ನಿಮ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ಕೊಬ್ಬಿನ ಆಹಾರವನ್ನು ತ್ಯಜಿಸುವುದು ಉತ್ತಮ.
ನಿಮ್ಮ ತ್ವಚೆಯನ್ನು ಹೈಡ್ರೇಟ್ ಮಾಡಲು ಮತ್ತು ಅದರ ನೈಸರ್ಗಿಕ ಹೊಳಪನ್ನು ಕಾಪಾಡಿಕೊಳ್ಳಲು ಸಾಕಷ್ಟು ನೀರು ಕುಡಿಯಿರಿ.
ಮಳೆಗಾಲದಲ್ಲಿ ಕೂದಲು ಒಣಗಿ ತುರಿಕೆಯಾಗುತ್ತದೆ. ಇದು ಸಾಮಾನ್ಯ ಸಮಸ್ಯೆಯಾಗಿದೆ. ಹಾಗಾಗಿ ಆ್ಯಂಟಿ ಡ್ಯಾಂಡ್ರಫ್ ಶಾಂಪೂ ಬಳಸಿ. ಸ್ನಾನ ಮಾಡುವ ಒಂದು ಗಂಟೆ ಮೊದಲು ನಿಮ್ಮ ತಲೆಯನ್ನು ಎಣ್ಣೆಯಿಂದ ಮಸಾಜ್ ಮಾಡಿ.