ಜೋಡೋ ಯಾತ್ರೆಯಲ್ಲಿ ಪಾಕ್ ಪರ ಘೋಷಣೆ ಆರೋಪ: ಕಾಂಗ್ರೆಸ್ ನಾಯಕರ ವಿರುದ್ಧ ಕೇಸ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮಧ್ಯಪ್ರದೇಶದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ‘ಪಾಕಿಸ್ತಾನ ಪರ’ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಮಧ್ಯಪ್ರದೇಶ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಪಿಯೂಷ್ ಬಾಬೆಲೆ ಮತ್ತು ಐಟಿ ಮುಖ್ಯಸ್ಥ ಅಭಯ್ ತಿವಾರಿ ಅವರ ವಿರುದ್ಧ ಬಿಜೆಪಿ ನಾಯಕರು ಪ್ರಕರಣ ದಾಖಲಿಸಿದ್ದಾರೆ.
ಪಕ್ಷದ ರಾಜ್ಯ ವಕ್ತಾರ ಪಂಕಜ್ ಚತುರ್ವೇದಿ ಮತ್ತು ರಾಜ್ಯ ಸಹ ಮಾಧ್ಯಮ ಉಸ್ತುವಾರಿ ನರೇಂದ್ರ ಶಿವಾಜಿ ಪಟೇಲ್ ಅವರು ಅಪರಾಧ ವಿಭಾಗಕ್ಕೆ ನೀಡಿದ ದೂರಿನಲ್ಲಿ, ಕಾಂಗ್ರೆಸ್‌ನ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಮಲ್ ನಾಥ್ ಸೇರಿದಂತೆ ಇಡೀ ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರೆಯ ನೆಪದಲ್ಲಿ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಿದೆ ಎಂದು ಆರೋಪಿಸಲಾಗಿದೆ. ಯಾತ್ರೆಯಲ್ಲಿ ದೇಶದ ಶಾಂತಿ ಕದಡಲು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಲಾಗುತ್ತಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
ನವೆಂಬರ್ 25 ರಂದು ಮಧ್ಯಪ್ರದೇಶದ ಬಿಜೆಪಿ ಮಾಧ್ಯಮ ಉಸ್ತುವಾರಿ ಲೋಕೇಂದ್ರ ಪರಾಶರ್ ಅವರು ತಮ್ಮ ಅಧಿಕೃತ ಹ್ಯಾಂಡಲ್‌ನಿಂದ ಮಧ್ಯಪ್ರದೇಶದ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ಸಿಗರು  ಪಾಕಿಸ್ತಾನದ ಪರ ಘೋಷಣೆಗಳನ್ನು ಎತ್ತಿದ್ದಾರೆ ಎಂದು ಹೇಳಲಾದ ವೀಡಿಯೊವನ್ನು ಟ್ವೀಟ್ ಮಾಡಿದ್ದರು. ಇದು ಜನರ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತಿದೆ ಎಂದು ಕಾಂಗ್ರೆಸ್‌ನ ಕಾನೂನು ವಿಭಾಗಕ್ಕೆ ಸೇರಿದ ವಕೀಲ ಅಂಕಿತ್ ಮಿಶ್ರಾ ಅವರು ಮಧ್ಯಪ್ರದೇಶ ಘಟಕದ ಭಾರತೀಯ ಜನತಾ ಪಕ್ಷದ ಮಾಧ್ಯಮ ಘಟಕದ ಮುಖ್ಯಸ್ಥ ಲೋಕೇಂದ್ರ ಪರಾಶರ್ ವಿರುದ್ಧ ರಾಯ್‌ಪುರದ ಸಿವಿಲ್ ಲೈನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ನವೆಂಬರ್ 26 ರಂದು, ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದವರು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆಗಳನ್ನು ಕೂಗಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ.
ಆದರೆ, ಕಾಂಗ್ರೆಸ್ ಪಕ್ಷವು ಈ ಹೇಳಿಕೆಯನ್ನು ನಿರಾಕರಿಸಿದ್ದು, ಇದು ರಾಹುಲ್ ಗಾಂಧಿಯವರ ಮಾನಹಾನಿಗೆ ಬಿಜೆಪಿ ನಡೆಸುತ್ತಿರುವ ಪಿತೂರಿ ಎಂದು ದೂರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!