Thursday, September 4, 2025

ಡಿಕೆ ಶಿವಕುಮಾರ್ ಬೆಂಬಲಿಗರ ವಿರುದ್ಧದ ಕೇಸ್ ವಾಪಸ್: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರಿಗೆ ಸಂಬಂಧಿಸಿದ ಒಟ್ಟು 11 ಪ್ರಕರಣಗಳನ್ನು ಕೈಬಿಡಲು ಅನುಮೋದನೆ ನೀಡಿದೆ.

2019ರಲ್ಲಿ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ್ದ ಅವರ ಬೆಂಬಲಿಗರು ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ 11 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ. ಇದರೊಂದಿಗೆ ಬೇರೆ ಬೇರೆ 62 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದ್ದರು. ಇದನ್ನು ಖಂಡಿಸಿ ಡಿಕೆ ಶಿವಕುಮಾರ್ ಬೆಂಬಲಿಗರು ಬೀದಿಗಳಿದು ಪ್ರತಿಭಟನೆ ಮಾಡಿದ್ದರು. ಅಲ್ಲದೇ ಸರ್ಕಾರಿ, ಸಾರ್ವಜನಿ ಆಸ್ತಿ ಪಾಸ್ತಿಗೆ ಹಾನಿ ಮಾಡಿದ್ದರು. ಈ ಸಂಬಂಧ ಡಿಕೆ ಶಿವಕುಮಾರ್ ಬೆಂಗಲಿಗರ ವಿರುದ್ಧ ಒಟ್ಟು 11 ಪ್ರಕರಣಗಳು ದಾಖಲಾಗಿದ್ದವು.

ಇದನ್ನೂ ಓದಿ