October 1, 2026
Thursday, October 1, 2026
spot_img

ಡಾ. ರವಿ ಪಾಟೀಲ್, ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ: ಕಾಂಗ್ರೆಸ್ ವಿರುದ್ಧ ಶೆಟ್ಟರ್ ವಾಗ್ದಾಳಿ

ಹೊಸದಿಗಂತ ವರದಿ ಬೆಳಗಾವಿ:

ನಗರದ ಬಿಜೆಪಿ ನಾಯಕ ಡಾ. ರವಿ ಪಾಟೀಲ್ ಹಾಗೂ ಪಕ್ಷದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದು ಸಂಪೂರ್ಣ ನಿಯಮಬಾಹಿರ ಮತ್ತು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದರು.

ಗುರುವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು. ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ, ತಕರಾರು ಸಲ್ಲಿಸಬಾರದು ಎಂದು ಹೇಳಿದ್ದಕ್ಕೆ ಪ್ರಕರಣ ದಾಖಲಿಸುವುದು ಎಷ್ಟು ಸರಿ ಎಂದು ಕಾಂಗ್ರಸ್ ಸರ್ಕಾರಕ್ಕೆ ಪ್ರಶ್ನಿಸಿದರು.

ಬಿಎಲ್ಒ ಮಟ್ಟದಲ್ಲಿ ತಕರಾರುಗಳಿದ್ದರೆ ಅವರು ಪರಿಶೀಲನೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ಆದರೆ, ಎಸ್ಐಆರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೂ ಕಾಂಗ್ರೆಸ್ ಅನಗತ್ಯವಾಗಿ ಹೋರಾಟ ನಡೆಸುತ್ತಿದೆ ಎಂದು ಶೆಟ್ಟರ್ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆಯನ್ನು ರಾಜ್ಯ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಸರ್ಕಾರದ ಇಂತಹ ನಡೆಗೆ ಮುಂಬರುವ ದಿನಗಳಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಅವರು ಎಚ್ಚರಿಸಿದರು.

Must Read