ಈಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಕೇಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಈಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ದೂರು ದಾಖಲಾಗಿದೆ.
ಜಗ್ಗಿ ವಾಸುದೇವ್ ಅವರು ಜೀವಂತ ಹಾವು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಉರಗ ತಜ್ಞ ಪೃಥ್ವಿರಾಜ್ ದೂರು ನೀಡಿದ್ದಾರೆ.
ಕೆಲದಿನಗಳ ಹಿಂದೆ ನಡೆದ ನಾಗಮಂಟಪ ಪ್ರತಿಷ್ಠಾನ ಕಾರ್ಯಕ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರು ಜೀವಂತ ಹಾವನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದರು. ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಜಗ್ಗಿ ವಾಸುದೇವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!