March 12, 2026
Thursday, March 12, 2026
spot_img

ಎಂಎಲ್​​​ಸಿ ಸೂರಜ್ ರೇವಣ್ಣ ವಿರುದ್ದದ ಕೇಸ್: ಮರು ಪರಿಶೀಲನಾ‌ ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೆಡಿಎಸ್ ಎಂಎಲ್​​​ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಲ್ಲಿಸಿದ ಮರುಪರಿಶೀಲನಾ‌ ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ.

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಇದರ ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಾಗಿತ್ತು. ಜೂನ್ 23 ರಂದು ಸೂರಜ್ ರೇವಣ್ಣರನ್ನು ಬಂಧಿಸಲಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !